ಸಿಬಿಎಸ್‌ಇ ಶಾಲೆಗಳ ಜಿಲ್ಲಾ ಸಂಯೋಜಕ ಡಾ.ಮಿಥುನ ದೇಶಪಾಂಡೆ ಮಾತನಾಡಿ, ಶಿಕ್ಷಕರ ವೃತ್ತಿಪರ ಸಾಮರ್ಥ್ಯ ವೃದ್ಧಿಗೆ ಹಾಗೂ ಬೋಧನೆಯಲ್ಲಿ ಹೊಸ ವಿಧಾನ ಅಳವಡಿಸಿಕೊಳ್ಳಲು ಕಾರ್ಯಾಗಾರ ಸಹಕಾರಿ ಎಂದರು. ಕಾರ್ಯಾಗಾರದಲ್ಲಿ ಶಿಕ್ಷಕರ ಬೋಧನಾ ಕೌಶಲವನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಲು ವಿವಿಧ ವಿಧಾನ, ಉಪಯುಕ್ತ ಸಲಹೆ ಹಾಗೂ ಪ್ರಾಯೋಗಿಕ ಚಟುವಟಿಕೆ ಪರಿಚಯಿಸಿದರು.