ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜತೆಗೆ ಸಚಿವ ಸ್ಥಾನಕ್ಕೂ ಅವಕಾಶವಿತ್ತು. ಆದರೆ, ಇದೀಗ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಮಾಡಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ಪಕ್ಷದಲ್ಲಿರುವ ನಮ್ಮವರೇ ನಮ್ಮ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತರ ಮಾಡುತ್ತಿದ್ದು, ಅದೆಲ್ಲವನ್ನು ಮೆಟ್ಟಿ ಬೆಳೆಯಬೇಕಾಗಿದೆ. ಹಾಗಂತ ಯಾರ ವಿರುದ್ಧ ಅಸಮಾಧಾನ ಇಲ್ಲ. ನಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಧಾರದ ರಹಿತ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ತನಿಖೆ ನಡೆಯುತ್ತಿದೆ. ಪಕ್ಷದಲ್ಲಿ ಇನ್ನೂ ಸಾಕಷ್ಟು ಅವಕಾಶಗಳಿದ್ದು, ಹಂತ ಹಂತವಾಗಿ ಸಿಗಲಿವೆ ಎಂದು ತಿಳಿಸಿದರು.