ರಾಯಬಾಗ: ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಜನರ ದಾಹ ನೀಗಿಸುವ ನಿಟ್ಟಿನಲ್ಲಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಪಪಂ ವತಿಯಿಂದ ಶುದ್ಧ ಕುಡಿಯುವ ನೀರಿನ ಮಡಕೆ ಇಡಲಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಎಸ್.ಆರ್.ಮಾಂಗ ಹೇಳಿದರು. ಪಟ್ಟಣ ಪಂಚಾಯಿತಿ ಎದುರು ಇರಿಸಿರುವ ಕುಡಿಯುವ ನೀರಿನ ಮಡಕೆಗೆ ಈಚೆಗೆ ಚಾಲನೆ ನೀಡಿ ಮಾತನಾಡಿ, ಕುಡಿಯುವ ನೀರಿನ ಗುಣಮಟ್ಟ ಮತ್ತು ನೈರ್ಮಲ್ಯದ ಕಡೆಗೆ ಹೆಚ್ಚಿನ ಗಮನ ವಹಿಸಲಾಗಿದ್ದು, ಅರವಟಿಗೆಗಳಲ್ಲಿ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ದಾಹ ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.