ಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ಮೂವರು ಯುಟ್ಯೂಬರ್‌ಗಳನ್ನು ಪುನಃ ವಶಕ್ಕೆ ಪಡೆದಿರುವ ಮಾಳಮಾರುತಿ ಠಾಣೆ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.