ಹೌದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆ.2ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಗೆ ವರೆಗೆ ಲಿಖಿತ ಪರೀಕ್ಷೆ ನಡೆಸುತ್ತಿದ್ದು ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ 61 ಪರೀಕ್ಷಾ ಕೇಂದ್ರಗಳಲ್ಲಿ 25,156 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ಪರೀಕ್ಷೆ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆ ಜತೆಗೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡಿದೆ.