ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ

ಬೆಳಗಾವಿಯ ವಸತಿ ನಿಲಯಗಳಿಗೆ ಬುಧವಾರ ಮಾನವ ಹಕ್ಕುಗಳ‌ ಆಯೋಗದ ಅಧ್ಯಕ್ಷ, ಸದಸ್ಯರು ಭೇಟಿ‌‌ ನೀಡಿದರು.
ಬೆಳಗಾವಿಯ ವಸತಿ ನಿಲಯಗಳಿಗೆ ಬುಧವಾರ ಮಾನವ ಹಕ್ಕುಗಳ‌ ಆಯೋಗದ ಅಧ್ಯಕ್ಷ, ಸದಸ್ಯರು ಭೇಟಿ‌‌ ನೀಡಿದರು.
Published on
ಬೆಳಗಾವಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅವರು ಬುಧವಾರ ಸದಾಶಿವ ನಗರದಲ್ಲಿನ
ಸಮಾಜ ಕಲ್ಯಾಣ ಇಲಾಖೆಯ ಸರಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಬಾಲಕಿಯರ‌ ವಸತಿ ನಿಲಯ ಹಾಗೂ ಸುಭಾಷ ನಗರದ ಅಲ್ಪಸಂಖ್ಯಾತರ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸತಿ ನಿಲಯಗಳಲ್ಲಿನ ವಿಧ್ಯಾರ್ಥಿನಿಯರಿಂದ‌ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದರು.
ವಸತಿ‌ ನಿಲಯದಲ್ಲಿನ ಬಾಲಕರ ಕೊಠಡಿ, ಅಡುಗೆ ಮನೆ, ದಾಸ್ತಾನು ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ವಿತರಿಸುವುದರ ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಸತಿ ನಿಲಯಗಳಲ್ಲಿನ ವಿದ್ಯಾರ್ಥಿನಿಯರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲು ತಿಳಿಸಿದರು.
ಆಯೋಗದ ಸದಸ್ಯರಾದ ಎಸ್.ಕೆ.ವಂಟಗೋಡಿ ಅವರು ವಸತಿ ನಿಲಯದಲ್ಲಿನ ಸಿ. ಸಿ.ಕ್ಯಾಮೆರಾ, ಬಯೋಮೆಟ್ರಿಕ್ ಸಾಧನಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಖಾತರಿ ಪಡಿಸಿಕೊಂಡು ವಸತಿ ನಿಲಯಗಳಲ್ಲಿನ ವಿಧ್ಯಾರ್ಥಿಗಳ ಮೇಲೆ ನಿಗಾವಹಿಸಬೇಕು. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕ ರಾಮನಗೌಡ ಕನ್ನೋಳಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಫ್.ಯು.ಪೂಜಾರಿ, ತಹಶೀಲ್ದಾರ ಬಸವರಾಜ ನಾಗರಾಳ ಸೇರಿದಂತೆ ನಿಲಯಪಾಲಕರು ಹಾಜರಿದ್ದರು.
ತದನಂತರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net