ನಾಗರಮುನ್ನೋಳಿ ಪ್ರೌಢಶಾಲೆ ಉನ್ನತೀಕರಣ

ನಾಗರಮುನ್ನೋಳಿ ಸರ್ಕಾರಿ ಶಾಲೆ ಉನ್ನತೀಕರಣಕ್ಕೆ ಶ್ರಮಿಸಿದ ಪ್ರಕಾಶ ಹುಕ್ಕೇರಿ ಅವರನ್ನು ಚಿಕ್ಕೋಡಿ ಪಟ್ಟಣದ ಗೃಹ ಕಚೇರಿಯಲ್ಲಿ ಗ್ರಾಮಸ್ಥರು ಸನ್ಮಾನಿಸಿದರು. ಸಿದ್ದಪ್ಪ ಮರ‌್ಯಾಯಿ, ಪಾಂಡುರಂಗ ಭಂಡಾರೆ ಇತರರಿದ್ದರು.
ನಾಗರಮುನ್ನೋಳಿ ಸರ್ಕಾರಿ ಶಾಲೆ ಉನ್ನತೀಕರಣಕ್ಕೆ ಶ್ರಮಿಸಿದ ಪ್ರಕಾಶ ಹುಕ್ಕೇರಿ ಅವರನ್ನು ಚಿಕ್ಕೋಡಿ ಪಟ್ಟಣದ ಗೃಹ ಕಚೇರಿಯಲ್ಲಿ ಗ್ರಾಮಸ್ಥರು ಸನ್ಮಾನಿಸಿದರು. ಸಿದ್ದಪ್ಪ ಮರ‌್ಯಾಯಿ, ಪಾಂಡುರಂಗ ಭಂಡಾರೆ ಇತರರಿದ್ದರು.
Published on
ಚಿಕ್ಕೋಡಿ: ನಾಗರಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಶಾಲಾ ಶಿಕ್ಷಣ ಸಾಕ್ಷರತಾ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.
ತಾಲೂಕಿನ ನಾಗರಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನಲೆ, ಈಚೆಗೆ ಗ್ರಾಮಸ್ಥರು ಅವರನ್ನು ಪಟ್ಟಣದ ಸ್ವಗೃಹ ಕಚೇರಿ ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾಗರಮುನ್ನೋಳಿ ಗ್ರಾಪಂ ಅಧ್ಯಕ್ಷ, ಸದಸ್ಯರು ಮುಖ್ಯಶಿಕ್ಷಕ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಗ್ರಾಮಸ್ಥರು ಶಾಲೆ ಉನ್ನತೀಕರಿಸಲು ಮನವಿ ಸಲ್ಲಿಸಿದ್ದರು. ಬಡ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣಕ್ಕಾಗಿ ಮಜಲಟ್ಟಿ ಅಥವಾ ಚಿಕ್ಕೋಡಿಗೆ ಬರಬೇಕಿತ್ತು. ಇದರಿಂದ ಕೆಲ ಮಕ್ಕಳು ಎಸ್ಸೆಸ್ಸೆಲ್ಸಿ ಹಂತದಲ್ಲಿಯೇ ಶಿಕ್ಷಣ ಕೊನೆಗೊಳಿಸುತ್ತಿದ್ದರು. ಗ್ರಾಮಸ್ಥರ ಮನವಿಯಂತೆ ಸರ್ಕಾರ ಶಾಲೆಯನ್ನು ಉನ್ನತೀಕರಿಸಿದೆ ಎಂದರು. ಮುಖಂಡ ಸಿದ್ದಪ್ಪ ಮರ‌್ಯಾಯಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಾಂಡುರಂಗ ಭಂಡಾರೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net