ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲಾ ರಾಜಕಾರಣ ಅತಿಹೆಚ್ಚು ಪ್ರಭಾವ ಹೊಂದಿದ್ದು, ಬಿಜೆಪಿ ಸಂಘಟನೆ ಮತ್ತಷ್ಟು ಗಟ್ಟಿಗೊಳಿಸಬೇಕಿದೆ.ಆ ನಿಟ್ಟಿನಲ್ಲಿ ಮನೆ ಮನೆಗೆ, ಹಳ್ಳಿಗಳಿಗೆ ತೆರಳಿ ಪಕ್ಷ ಸಂಘಟನೆ, ಕೇಂದ್ರ ಸರ್ಕಾರದ ಯೋಜನೆ ಕುರಿತು ಸಭೆ ನಡೆಸಿ ಜನರಿಗೆ ತಿಳುವಳಿಕೆ ನೀಡಬೇಕು. ಇದಕ್ಕಾಗಿ ಪದಾಧಿಕಾರಿ, ಕಾರ್ಯಕರ್ತರು, ಹಾಲಿ, ಮಾಜಿ ಶಾಸಕರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.