ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಸಾಂಬರೆ ಗ್ರಾಮದಲ್ಲಿ ಜನರಿಗೆ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರ ತಂಡ ಚಿಕಿತ್ಸೆ ನೀಡಿತು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮಹಾರಾಷ್ಟ್ರದ ಸಾಂಬರೆ ಗ್ರಾಮದಲ್ಲಿ ಘಟನೆ
ಸ್ಥಳಕ್ಕೆ ಧಾವಿಸಿದ ವೈದ್ಯಕೀಯ ಸಿಬ್ಬಂದಿ
ಬೆಳಗಾವಿ: ಮಹಾರಾಷ್ಟ್ರದ ಗಡಹಿಂಗ್ಲಜ ತಾಲೂಕಿನ ಸಾಂಬರೆ ಗ್ರಾಮದಲ್ಲಿ ಈಚೆಗೆ ದತ್ತ ಜಯಂತಿ ಮಹಾಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ 200ಕ್ಕೂ ಅಧಿಕ ಜನರಿಗೆ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರ ತಂಡ ತುರ್ತು ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಿದೆ.
ಗಡಹಿಂಗ್ಲಜ ಗ್ರಾಮದಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ವಿಷಯುಕ್ತ ಆಹಾರ ಸೇವಿಸಿ 200ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭಿಸಿದ ತಕ್ಷಣ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಸಲಹೆ ಮೇರೆಗೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಹಾಗೂ ಡಾ.ಮಾಧವ ಪ್ರಭು ನೇತೃತ್ವದಲ್ಲಿ ವೈದ್ಯರ ತಂಡ ಗ್ರಾಮಕ್ಕೆ ಹೋಗಿ ಚಿಕಿತ್ಸೆ ನೀಡಿದೆೆ. ಗಡಹಿಂಗ್ಲಜ ಮಾಜಿ ಶಾಸಕ ರಾಜೇಶ ಪಾಟೀಲ ಡಾ.ಪ್ರಭಾಕರ ಕೋರೆ ಅವರಿಗೆ ವೈದ್ಯಕೀಯ ಸೇವೆ ಕಲ್ಪಿಸುವಂತೆ ಕೋರಿದ್ದರು.
20 ವೈದ್ಯರು, 10 ನರ್ಸಿಂಗ್ ಸಿಬ್ಬಂದಿ, 5 ಆಂಬುಲೆನ್ಸ್ ಹಾಗೂ ಅಗತ್ಯ ಔಷಧಗಳ ಮೂಲಕ ಕೇವಲ ಒಂದು ಗಂಟೆಯಲ್ಲಿ ಘಟನಾ ಸ್ಥಳಕ್ಕೆ ತಲುಪಿದ ಸಿಬ್ಬಂದಿ ಅಸ್ವಸ್ಥಗೊಂಡ ಭಕ್ತರಿಗೆ ಅಗತ್ಯ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಕರ್ನಲ್‌ಡಾ.ಎಂ.ದಯಾನಂದ ಅವರ ಈ ಕಾರ್ಯಕ್ಕೆ ಮಹಾರಾಷ್ಟ್ರದ ಶಾಸಕರು, ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.