ಮಾದಕ ದ್ರವ್ಯ ಮಾರಾಟ ಜಾಲ ಭೇದಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ಕಳೆದ ವರ್ಷ ನಡೆಸಿದ ಕಾರ್ಯಾಚರಣೆಯ ಫಲವಾಗಿ 73 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ, ಕಳೆದ 2025 ನೇ ವರ್ಷದಲ್ಲಿ 74,73,140 ರೂ. ಮೌಲ್ಯದ ಮಾದಕ ದ್ರವ್ಯವನ್ನು ಜಪ್ತು ಮಾಡಿ 36 ಜನರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರಲ್ಲಿ 23 ಜನ ಗ್ರಾಹಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದೇ ತೆರನಾಗಿ ಪ್ರಸಕ್ತ ವರ್ಷದ ಜೂನ್ ಮಾಸಾಂತ್ಯದವರೆಗೆ 24,03,580 ರೂ. ಮೌಲ್ಯದ ಮಾದಕ ದ್ರವ್ಯ ಜಪ್ತು ಮಾಡಿಕೊಂಡು, 37 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 17 ಜನ ಗ್ರಾಹಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 98,76,720 ರೂ. ಮೌಲ್ಯದ ಮಾದಕ ದ್ರವ್ಯ ಜಪ್ತು ಮಾಡಿ ನಾಶಪಡಿಸಲಾಗಿದೆ ಎಂದು ವಿವರಣೆ ನೀಡಿದರು.