ಶುಕ್ರವಾರ ಬೆಳಗ್ಗೆ 8ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಬೆಳಿಗ್ಗೆ 11 ಗಂಟೆಗೆ ಮುಗಳಖೋಡದ ಸದ್ಗುರು ಶ್ರೀಯಲ್ಲಾಲಿಂಗೇಶ್ವರ ಬೃಹನ್ಮಠದಲ್ಲಿ ಜರುಗುವ ಸದ್ಗುರು ಶ್ರೀ ಯಲ್ಲಾಲಿಂಗ ಮಹಾಪ್ರಭು 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1ಕ್ಕೆ ರಸ್ತೆಯ ಮೂಲಕ ಹೊಸಪೇಟೆಗೆ ಪ್ರಯಾಣ ಬೆಳೆಸುವರು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.