ಪ್ರತ್ಯೇಕ ಜಿಲ್ಲೆ ಕುರಿತು ಚರ್ಚಿಸುತ್ತೇವೆ

ಚಿಕ್ಕೋಡಿ ಸಂಸದರ ಕಚೇರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ವೀರಕುಮಾರ ಪಾಟೀಲ, ಮಾರುತಿ ಕುಂದಿ ಇತರರಿದ್ದರು.
ಚಿಕ್ಕೋಡಿ ಸಂಸದರ ಕಚೇರಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ವೀರಕುಮಾರ ಪಾಟೀಲ, ಮಾರುತಿ ಕುಂದಿ ಇತರರಿದ್ದರು.
Published on
ಚಿಕ್ಕೋಡಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಂಸದರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಬಹುದಿನದ ಬೇಡಿಕೆಯಾದ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಘೋಷಣೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಈಚೆಗೆ ಸುರಿದ ಮಳೆಯಿಂದ ಜಲಾಶಯಕ್ಕೆ ನೀರು ಸಂಗ್ರಹವಾಗಿದೆ. ಇದರಿಂದ ಕುಡಿಯುವ ನೀರಿಗೆ ತೊಂದರೆ ಇಲ್ಲ. ಮಳೆ ಅಭಾವದಿಂದ ಉಂಟಾದ ಬೆಳೆ ಹಾನಿ ಬಗ್ಗೆ ಸರ್ಕಾರದಿಂದ ಶೀಘ್ರವೇ ಸಮೀಕ್ಷೆ ನಡೆಸಲಾಗುವುದು ಎಂದರು.
ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಎಚ್.ಎಸ್.ನಸಲಾಪುರೆ, ಶಿವಾನಂದ ಮರ್ಯಾಯಿ, ರುದ್ರಪ್ಪ ಸಂಗಪ್ಪಗೋಳ, ಕಿರಣ ರಜಪೂತ, ಮಾರುತಿ ಕುಂದಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net