ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯವು ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ 2025-26ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ, ಸಾಂಸ್ಕೃತಿಕ , ಎನ್‌ಎಸ್‌ಎಸ್, ಎನ್‌ಸಿಸಿ, ರೆಡ್ ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಬಲಿಯಾಗುತ್ತಿದ್ದು, ಇದರಿಂದ ಬಹಳ ಅನಾಹುತವಾಗುತ್ತಿದೆ. ಬದುಕಿ ಬಾಳಬೇಕಾದ ಅದೆಷ್ಟೋ ಜೀವಗಳು ಸಾವಿನೊಂದಿಗೆ ಅಂತ್ಯವಾಗುತ್ತಿದ್ದು, ಇದನ್ನು ತಡೆಯಲು ವಿದ್ಯಾರ್ಥಿಗಳು ಕಲೆ, ಸಂಸ್ಕೃತಿ ಗೌರವಿಸಿ ಮೈಗೂಡಿಸಿಕೊಳ್ಳಬೇಕಿದೆ ಎಂದರು.