ಮಹಿಳಾ ಮೀಸಲು ಕಾಯ್ದೆ ದೇಶದ ಮಹಿಳೆಯರ ದೀರ್ಘಕಾಲದ ಹೋರಾಟದ ಫಲವಾಗಿದೆ. ಇಲ್ಲಿಯವರೆಗೆ ಯಾವುದೇ ಪಕ್ಷಗಳು ಮಹಿಳೆಯರಿಗೆ ಮೀಸಲಾತಿ ನೀಡಲು ಮನಸ್ಸು ಮಾಡಿರಲಿಲ್ಲ. ಪ್ರದಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆಯನ್ನು ಇರಿಸಿದೆ ಎಂದರು. ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಕುಂತಲಾ ಡೋಣವಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಇದ್ದರು.