ಬೆಳಗಾವಿಯಲ್ಲಿ ಶುಕ್ರವಾರ ಕಾರ್ಮಿಕ ದಿನದ ಪ್ರಯುಕ್ತ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಬೇಡಿಕೆಗಳಿಗಾಗಿ ಆಗ್ರಹಿಸಲಾಯಿತು. ಮಂದಾ ನೇವಗಿ, ಸುನೀತಾ ಪಾಟಿಲ, ರೇಖಾ ಗಳಗ, ಜೀತು ಕಾಗಣೇಕರ ಇತರರಿದ್ದರು.
ಬೆಳಗಾವಿ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ನಗರದಲ್ಲಿ ಶುಕ್ರವಾರ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ದಿನದಂದೇ ಪ್ರತಿಭಟನೆ ನಡೆಸಲಾಯಿತು.
ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸಿ ಸೌಲಭ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ. ಸರ್ಕಾರಗಳ ಆರ್ಥಿಕ ನೀತಿಗಳಿಂದ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಕೂಲಿ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವು ಸಿಗುತ್ತಿಲ್ಲ. ದುಡಿಯುವ ವರ್ಗ ಆರ್ಥಿಕ ಸಂಕಷ್ಟದಲ್ಲಿಯೇ ದಿನದೂಡುವ ಪರಿಸ್ಥಿತಿ ಎದುರಾಗಿದೆ ಎಂದು ನೋವು ತೋಡಿಕೊಂಡರು.