ಯಡೂರು ಧರ್ಮೋತ್ಸವ ಸಂಪನ್ನ

ಯಡೂರದಲ್ಲಿ ಹಮ್ಮಿಕೊಂಡಿದ್ದ ಕೃಷ್ಣಾರತಿ ಕಾರ್ಯಕ್ರಮದಲ್ಲಿ ಕಾಶಿ, ಶ್ರೀಶೈಲ, ಉಜ್ಜಯಿನಿ ಪೀಠಗಳ ಜಗದ್ಗುರುಗಳು, ಪದ್ಮಶ್ರೀ ಡಾ.ಪ್ರಭಾಕರ ಕೋರೆ ಇತರರು ಪಾಲ್ಗೊಂಡಿದ್ದರು.
ಯಡೂರದಲ್ಲಿ ಹಮ್ಮಿಕೊಂಡಿದ್ದ ಕೃಷ್ಣಾರತಿ ಕಾರ್ಯಕ್ರಮದಲ್ಲಿ ಕಾಶಿ, ಶ್ರೀಶೈಲ, ಉಜ್ಜಯಿನಿ ಪೀಠಗಳ ಜಗದ್ಗುರುಗಳು, ಪದ್ಮಶ್ರೀ ಡಾ.ಪ್ರಭಾಕರ ಕೋರೆ ಇತರರು ಪಾಲ್ಗೊಂಡಿದ್ದರು.
Published on
ಮಾಂಜರಿ: ಚಿಕ್ಕೋಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಡೂರಿನಲ್ಲಿ ಮಾ.1ರಿಂದ 6ರವರೆಗೆ ನಡೆದ ಮಹಾಕುಂಭೋತ್ಸವ, ರಾಜಗೋಪುರ ಲೋಕಾರ್ಪಣೆ ಹಾಗೂ ಕಷ್ಣಾರತಿ ಕಾರ್ಯಕ್ರಮ ಅದ್ದೂರಿಯಾಗಿ ಮಂಗಲಗೊಂಡವು.
ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ದೇವಾಲಯ ಆವರಣ, ನದಿ ಘಾಟ್ ಹಾಗೂ ಗ್ರಾಮದ ಪ್ರಮುಖ ರಸ್ತೆಗಳು ಭಕ್ತರ ಜನಸಂದಣಿಯಿಂದ ಕಿಕ್ಕಿರಿದಿದ್ದವು. ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಜ್ಯೇಷ್ಠ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನೂತನ ಜಗದ್ಗುರು ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಹಾಗೂ ಉಜ್ಜಯಿನಿ ಪೀಠದ ರಾಜಗುರು ಸಿದ್ಧಲಿಂಗರಾಜ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಹಣ್ಣು, ಹೂವು, ಪ್ರಸಾದ, ಹೋಟೆಲ್ ಹಾಗೂ ಇತರ ವಸ್ತುಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ಆರು ದಿನ ದೊಡ್ಡ ಪ್ರಮಾಣದಲ್ಲಿ ವ್ಯಾಪಾರ ನಡೆದಿದ್ದು, ಆರ್ಥಿಕವಾಗಿ ಅನುಕೂಲಕರವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net