ಮುಗಳಖೋಡ: ಶ್ರೀ ಯಲ್ಲಾಲಿಂಗ ಪ್ರಭುಗಳ 141ನೇ ಜಯಂತ್ಯುತ್ಸವ ಅಂಗವಾಗಿ ಸೋಮವಾರ ಶ್ರೀ ಯಲ್ಲಾಲಿಂಗ ಪ್ರಭುಗಳ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಶ್ರೀಮಠದ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಿತು. ಸಿಂಗಾರಗೊಂಡ ನೂರಕ್ಕೂ ಹೆಚ್ಚು ಟ್ಯಾಕ್ಟರ್‌ಗಳೊಂದಿಗೆ ಸಂಜೆ ಶ್ರೀಮಠದಿಂದ ಪಟ್ಟಣದ ವಿವಿಧ ಓಣಿಗಳಲ್ಲಿ ಯಲ್ಲಾಲಿಂಗ ಮಹಾಪ್ರಭುಗಳ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ನೆರವೇರಿತು.