ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಯುವ ಜನತಾದಳದ ರಾಜ್ಯ ಅಧ್ಯಕ್ಷ ನಿಖಿಲ ಕುಮಾರಸ್ವಾಮಿ, ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಪಾಲ್ಗೊಳ್ಳುವರು. ಸಮಾವೇಶದ ಪ್ರಯುಕ್ತ ಅವತ್ತು ಬೆಳಗ್ಗೆ ನಗರದ ಸಿಪಿಎಡ್ ಮೈದಾನದಿಂದ ಬೈಕ್ ರ‌್ಯಾಲಿ ಆರಂಭಿಸಿ, ಚನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ, ಕಾಲೇಜು ರಸ್ತೆ ಮಾರ್ಗವಾಗಿ ಗಾಂಧಿ ಭವನಕ್ಕೆ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸುವರು ಎಂದು ಮಾಹಿತಿ ನೀಡಿದರು.