ಆರೋಗ್ಯದ ಕುರಿತು ಕಾಳಜಿ ವಹಿಸಿ

ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದಲ್ಲಿ ಆರೋಗ್ಯ ಜಾಗೃತಿ
 Health, awernnes ,program
: ನಗರದ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು  ವಿದ್ಯಾರ್ಥಿಗಳು ಉದ್ಘಾಟಿಸಿದರು.ಪ್ರೊ. ಎಸ್.ಸಿ.ಪಾಟೀಲ,ಎಂ.ಎ. ಸಪ್ನಾ ,ಡಾ. ಸೌಭಾಗ್ಯ ಭಟ್ ಇತರರಿದ್ದರು. 
Published on: 

ಆರೋಗ್ಯದ ಕುರಿತು ಕಾಳಜಿ ವಹಿಸಿ
| ವಿದ್ಯಾರ್ಥಿಗಳಿಗೆ ಪ್ರೊ.ಎಸ್.ಸಿ.ಪಾಟೀಲ ಸಲಹೆ | ಆರೋಗ್ಯ ಜಾಗೃತಿ ಕಾರ್ಯಕ್ರಮ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಬಾಲಕಿಯರ ಆರೋಗ್ಯವು ವೈಯಕ್ತಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕಿಶೋರಾವಸ್ಥೆಯಲ್ಲಿ ಬಾಲಕಿಯರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಸಿ.ಪಾಟೀಲ ಸಲಹೆ ನೀಡಿದರು.
ಇಲ್ಲಿನ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ಸಹಯೋಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಓರಿಯಂಟೇಶನ್ ಕಾರ್ಯಕ್ರಮ ಹಾಗೂ ಅಂತರರಾಷ್ಟ್ರೀಯ ಬಾಲಕಿಯರ ದಿನಾಚರಣೆಯ ಅಂಗವಾಗಿ ಕಿಶೋರಾವಸ್ಥೆಯ ಆರೋಗ್ಯ ಕುರಿತು ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಆರ್‌ಸಿಯು ಮಾಜಿ ಹಣಕಾಸು ಅಧಿಕಾರಿ ಎಂ.ಎ. ಸಪ್ನಾ ಮಾತನಾಡಿ ಆರೋಗ್ಯವೇ ಸಬಲೀಕರಣದ ಮೊದಲ ಹೆಜ್ಜೆಯಾಗಿದ್ದು, ಆರೋಗ್ಯ, ಶಿP್ಷÀಣ, ಆತ್ಮವಿಶ್ವಾಸ ಹಾಗೂ ಸಬಲೀಕರಣದ ಮಹತ್ವವನ್ನು ವಿವರಿಸಿದರು.
ಪಟ್ಟೆದ ಫರ್ಟಿಲಿಟಿ ಸೆಂಟರ್ ಸಲಹೆಗಾರ್ತಿ ಡಾ. ಸೌಭಾಗ್ಯ ಭಟ್ ಮಾತನಾಡಿ ಕಿಶೋರಾವಸ್ಥೆಯಲ್ಲಿನ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು, ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದರು.
ಕೆಆರ್‌ಸಿಯು ಮಹಿಳಾ ಸಬಲೀಕರಣ ಘಟಕದ ನಿರ್ದೇಶಕಿ ಪ್ರೊ.ಚಂದ್ರಿಕಾ ಕೆ.ಬಿ.ಮಹಿಳಾ ಸಬಲೀಕರಣ ಘಟಕದ ಸಂಯೋಜಕ ಪ್ರೊ. ಸುಮನ ಮುz್ದÁಪುರ, ಉಪಪ್ರಾಚಾರ್ಯ ಪ್ರೋ.ಅರ್ಜುನ ಜಂಬಗಿ, ಡಾ.ನಮಿತಾ ಪೊತರಾಜ,ಡಾ. ಸ್ವಪ್ನಾ ಮಹೀಂದ್ರಕರ್,ಡಾ.ಪ್ರಿಯಾAಕಾ ಜೋಗಿನಕಟ್ಟಿ, ದೀಪಾಲಿ ಭೋಸಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net