ಗಮನ ಸೆಳೆದ ಆರ್ ಎಸ್ ಎಸ್ ಪಥ ಸಂಚಲನ

ಬೆಳಗಾವಿಲಿ ಶಿಸ್ತುಬದ್ಧ ಹೆಜ್ಜೆ ಹಾಕಿದ ಗಣವೇಷಧಾರಿಗಳು
ಬೆಳಗಾವಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಪಥ ಸಂಚಲನ
ಬೆಳಗಾವಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಪಥ ಸಂಚಲನ
Published on: 

ಗಮನ ಸೆಳೆದ ಆರ್‌ಎಸ್‌ಎಸ್ ಪಥ ಸಂಚಲನ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ನಗರದಲ್ಲಿ ವಿಜಯದಶಮಿ ಉತ್ಸವ ಅಂಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಗರ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಆಕರ್ಷಕ ಪಥಸಂಚಲನ ನೋಡುಗರ ಗಮನ ಸೆಳೆಯಿತು.
ಇಲ್ಲಿನ ಸರ್ಕಾರಿ ಸರ್ದಾರ್ ಪ್ರೌಢಶಾಲೆ ಮೈದಾನದಲ್ಲಿ ಸಮಾವೇಶಗೊಂಡ ಸಾವಿರಾರು ಆರ್‌ಎಸ್‌ಎಸ್ ಗಣವೇಷಧಾರಿಗಳು, ಕಾಲೇಜು ರಸ್ತೆ, ರಾಣಿ ಚನ್ನಮ್ಮನ ವೃತ್ತ, ಕಾಕತಿವೇಸ್, ಶನಿವಾರ ಕೂಟ, ಗಣಪತಿ ಗಲ್ಲಿ, ನರಗುಂದಕರ ಭಾವೆ ಚೌಕ್, ಶನಿಮಂದಿರ ರಸ್ತೆ, ಶೇರಿ ಗಲ್ಲಿ, ಟಿಳಕ ಚೌಕ, ಧರ್ಮವೀರ ಸಂಭಾಜಿ ವೃತ್ತ, ಕಾಲೇಜು ರಸ್ತೆ ಮಾರ್ಗವಾಗಿ ಸಾಗಿ ಲಿಂಗರಾಜ ಕಾಲೇಜು ಮೈದಾನ ತಲುಪಿತು.
ದರಿಯುದ್ಧಕ್ಕೂ ಶಿಸ್ತುಬದ್ಧವಾಗಿ ಹೆಜ್ಜೆಹಾಕಿದ ಗಣವೇಷಧಾರಿಗರಿಗೆ ಸಾರ್ವಜನಿಕರು ಪುಷ್ಪವೃಷ್ಟಿ ಮಾಡಿ ಗೌರವಿಸಿದರು. ಮಕ್ಕಳು ಮಹಾನ್ ನಾಯಕರ ವೇಷ ಧರಿಸಿ ಕಣ್ಮನ ಸೆಳೆದರು.
ನಂತರ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರೊ.ಮಲ್ಲಿಕಾರ್ಜುನ ಅಳಗವಾಡಿ, ಆರ್‌ಎಸ್‌ಎಸ್‌ನ ಕರ್ನಾಟಕ ಉತ್ತರ ಪ್ರಾಂತದ ಸಹ ಬೌದ್ಧಿಕ ಪ್ರಮುಖ ರಾಮಚಂದ್ರ ಏಡಕೆ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net