ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಗುತ್ತಿಗೆದಾರರು
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯಿತಿ ರಾಜ್ ಎಂಜಿನಿಯರಿಂಗ್ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೋಟ್ಯಂತರ ರೂಪಾಯಿ ಕಾಮಗಾರಿ ಬಿಲ್ ಗಳನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ,ಚಿಕ್ಕೋಡಿ ಜಿಲ್ಲಾ ಗುತ್ತಿಗೆದಾರರು ಬುಧವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯಿತಿ ರಾಜ್ ಎಂಜಿನಿಯರಿಂಗ್ ಇಲಾಖೆ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಸಭೆ ನಡೆಸಿದ ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸಲು ವಿಳಂಬ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಕಾಮಗಾರಿಗಳ ಬಿಲ್ ಪಾವತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಸರಿಯಾದ ಸಮಯಕ್ಕೆ ಪತ್ರ ವ್ಯವಹಾರ ನಡೆಸುತ್ತಿಲ್ಲ ಎಂದು ಆರೋಪಿಸಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಸುಮಾರು 40 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಬಿಲ್ ಬಾಕಿ ಉಳಿದಿದೆ. ಸರಿಯಾದ ಯೋಜನಾ ವರದಿಸಿದ್ದಪಡಿಸದೇ ಕಾಮಗಾರಿ ಕೈಗೊಂಡ ಬಳಿಕ ಉಂಟಾಗುವ ಲೋಪಗಳಿಗೆ ಗುತ್ತಿಗೆದಾರರನ್ನೆ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ. ಇದರಿಂದ ಮಾನಸಿಕ ಮಾನಸಿಕ ಒತ್ತಡ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚಂದ್ರಕಾಂತ ಜೋನೆ ಇತರರಿದ್ದರು.