ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ

ಕಾರಿನಲ್ಲಿದ್ದ ಮಹಾರಾಷ್ಟ್ರ ಓರ್ವ ಸಾವು
Accident, death
ACCIDENT
Published on: 

ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ : ಓರ್ವ ಸಾವು
ಸಂಕೇಶ್ವರ: ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೊರಟಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಾರಾಷ್ಟçದ ನಾಶಿಕ ಜಿಲ್ಲೆಯ ಮಹಾಜನ ನಗರದ ನಿವಾಸಿ ಪಂಕಜ ಗೋಕುಲ ಬಾವಿಸ್ಕರ್ (೪೦)ಮೃತ ಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದ ಬಳಿ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.
ಮೃತ ವ್ಯಕ್ತಿ ಹಾಗೂ ಆತನ ಸಹೋದರ ಸತೀಶ ಬಾವಿಸ್ಕರ, ರೋಹಿತ ದೇವ ಮತ್ತು ರೋಷನ ಚೌದರಿ ಸೇರಿಕೊಂಡು ನಾಸಿಕದಿಂದ ತಿರುಪತಿಗೆ ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದ್ದು,ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಂಕಜ ಬಾವಿಸ್ಕರ್ ಸಂಕೇಶ್ವರ ಸರ್ಕಾರಿ ಆಸ್ಪತ್ರಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಸಂಕೇಶ್ವರ ಠಾಣೆ ಪೊಲೀಸ್‌ರು ತಿಳಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net