ದಡ್ಡಿ ಗ್ರಾಮದಲ್ಲಿ ಮನೆ ಕಳ್ಳತನ

ರಜೆಗೆ ಊರಿಗೆ ತೆರಳಿದ್ದ ಶಿಕ್ಷಕ ದಂಪತಿಗೆ ಶಾಕ್
ಮನೆ ಕಳ್ಳತನ
ಮನೆ ಕಳ್ಳತನ
Published on: 

ದಡ್ಡಿಯಲ್ಲಿ ಮನೆ ಕಳ್ಳತನ
ದಡ್ಡಿ :
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಶಿಕ್ಷಕ ಮಹಾಂತೇಶ ಪೂಜೇರಿ ಅವರ ಮನೆಯ ಬೀಗ ಮುರಿದು ಮನೆಯಲ್ಲಿದ್ದ ೧೮ ತೊಲೆ ಬೆಳ್ಳಿ ಹಾಗೂ ೨೦ ಸಾವಿರ ನಗದು ಹಣ ಕಳವು ಮಾಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಶಾಲೆಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮವಾದ ಕಿತ್ತೂರು ತಾಲೂಕಿನ ಶಿವನೂರು ಗ್ರಾಮಕ್ಕೆ ಮನೆ ಮಾಲೀಕರು ತೆರಳಿದ್ದರು. ಶಾಲೆಗಳು ಪುನರಾರಂಭಗೊಂಡ ಹಿನ್ನಲೆ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net