ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕಳಪೆ ಆಹಾರ ಪತ್ತೆ

ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಉಪ ಲೋಕಾಯುಕ್ತ
In centar bus satnd Food Found During Inspection by  Lokayukta
ಬೆಳಗಾವಿ ಬಸ್ ನಿಲ್ದಾಣದಲ್ಲಿ ಕಳಪೆ ಆಹಾರ ಮಾರಾಟ‌ ಪತ್ತೆ
Published on: 

-

ಬೆಳಗಾವಿ: ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕಾದ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಮೂಲಸೌಕರ್ಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತಾಂಡವವಾಡುತ್ತಿರುವುದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರ ದಿಢೀರ್ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.

ಗುರುವಾರ ಬಸ್ ನಿಲ್ದಾಣಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಅವರು, ವಿವಿಧ ಮಳಿಗೆಗಳು, ಶೌಚಗೃಹ, ನಮ್ಮ ಕ್ಲಿನಿಕ್ ಹಾಗೂ ವಸತಿಗೃಹಗಳನ್ನು ಪರಿಶೀಲಿಸಿ ಹಲವು ಲೋಪದೋಷಗಳನ್ನು ಪತ್ತೆಹಚ್ಚಿದರು. ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕರ್ತವ್ಯಲೋಪದ ಬಗ್ಗೆ ತರಾಟೆಗೆ ತೆಗೆದುಕೊಂಡರು.

ಬಸ್ ನಿಲ್ದಾಣದ ಶೌಚಾಲಯಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು, ಬಳಕೆದಾರರಿಗೆ ದರದ ಮಾಹಿತಿ ನೀಡುವ ಫಲಕಗಳನ್ನೂ ಅಳವಡಿಸಿರಲಿಲ್ಲ. ಶೌಚಗೃಹ ಬಳಕೆಗೆ ರಸೀದಿ ನೀಡದಿರುವುದು, ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಯಲ್ಲೇ ಇಂತಹ ನಿರ್ಲಕ್ಷ ಆಕ್ರೋಶ ಹೊರಹಾಕಿದರು.

ಬಸ್ ನಿಲ್ದಾಣದ ಉಪಹಾರ ಗೃಹಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತರು, ಅಲ್ಲಿನ ಸ್ವಚ್ಛತೆ ಮತ್ತು ಸುರಕ್ಷತಾ ವ್ಯವಸ್ಥೆಗಳ ಪತಿೀಲನೆ ವೇಳೆ ಆಹಾರ ಪದಾರ್ಥಗಳ ದರಪಟ್ಟಿ ಪ್ರದರ್ಶಿಸುವಂತೆ ಸೂಚಿಸಿದರು. ಉಪಹಾರ ಗೃಹಗಳ ಮೇಲೆ ನಿಯಮಿತ ನಿಗಾ ವಹಿಸಬೇಕಾದ ಆಹಾರ ಸುರಕ್ಷತಾ ಅಧಿಕಾರಿಗಳು ಸರಿಯಾಗಿ ಭೇಟಿ ನೀಡದಿರುವುದನ್ನು ಗಮನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆ

ವಿವಿಧ ಆಹಾರ ಮಳಿಗೆಗಳನ್ನು ಪರಿಶೀಲಿಸಿದಾಗ ಅವಧಿ ಮೀರಿದ ಆಹಾರ ಸಾಮಗ್ರಿಗಳು ಪತ್ತೆಯಾಗಿವೆ. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನುಪ ಲೋಕಾಯುಕ್ತ ಬಿ. ವೀರಪ್ಪ ಸೂಚಿಸಿದರು.

ವಸತಿಗೃಹದಲ್ಲಿ ತೆರಿಗೆ ಲೋಪ;ಮ

ಬಸ್ ನಿಲ್ದಾಣದ ವಸತಿಗೃಹಕ್ಕೆ ಭೇಟಿ ನೀಡಿ, ಅಲ್ಲಿನ ದಾಖಲೆಗಳನ್ನು ಪರಿಶೀಲಿಸಿದರು. ಬಿಲ್‌ಗಳಲ್ಲಿ ತೆರಿಗೆ ಮೊತ್ತವನ್ನು ನಮೂದಿಸದಿರುವುದನ್ನು ಗಮನಿಸಿದರು. ವಸತಿಗೃಹದಲ್ಲಿ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳ ಕೊರತೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿ ಪೊಲೀಸ್ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

, ಲೋಕಾಯುಕ್ತ ಎಸ್‌ಪಿ ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net