ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

ಆರೋಗ್ಯ ಜಾಗೃತಿ ಕಾರ್ಯಕ್ರಮ
ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಈಚೆಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ ಜರುಗಿತು.
ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಈಚೆಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ ಜರುಗಿತು.
Published on: 

ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ವಿಜಯವಾಣಿ ಸುದ್ದಿಜಾಲ ದಡ್ಡಿ:
ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ.ಗರ್ಭಾವಸ್ಥೆಯಿಂದಲೇ ಮಹಿಳೆಯರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದರ ಜತೆಗೆ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಹುಕ್ಕೇರಿ ತಾಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್.ಎಂ.ಸಾಭೋಜಿ ಹೇಳಿದರು.
 ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಶ್ರೀಗುರುಅಡವಿಸಿದ್ದೇಶ್ವರ ಮಠದಲ್ಲಿ ಈಚೆಗೆ ಆಯೋಜಿದ್ದ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ನಿವಾರಿಸಲು ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ ಹಾಗೂ ಸರಿಯಾದ ಆರೈಕೆಯ ಕುರಿತು ಕುಟುಂಬಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ ಲಕ್ಷö್ಮಣನವರ, ಶಹಬಂದರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶï ತೇಲಿ, ಚನ್ನಮ್ಮ ಗಡದವರ, ಶಿವಕ್ಕ ಬಂಜಿರಾಮ, ಕುಮಾರ ಕುಂಬಾರ, ರೇಣುಕಾ ಯಲಿಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net