ಸುವರ್ಣ ವಿಧಾನಸೌಧದಲ್ಲಿ ರೈತರ, ಸಕ್ಕರೆ ಕಾರ್ಖಾನೆಗಳ ಸಭೆ

-ಸಿಎಂ ಸಭೆಗೆ ನಾಲ್ವರು ರೈತರಿಗೆ ಮಾತ್ರ ಅವಕಾಶ
Farmers, sugar factories meet at Suvarna Vidhana Soudha
ಕಿತ್ತೂರಿನಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು.
Published on: 

ಬೆಳಗಾವಿ: ಸುವರ್ಣ ವಿಧಾನ ಸೌಧದಲ್ಲಿ ಅ.26ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಗೆ ನಾಲ್ವರು ರೈತ ಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಳಗಾವಿ ವಿಭಾಗ ಸೇರಿದಂತೆ ಸಂಬಂಧಪಟ್ಟ 15 ಜಿಲ್ಲೆಗಳಿಂದ ರೈತರು ಆಗಮಿಸುವ ಹಿನ್ನೆಲೆಯಲ್ಲಿ, ಸಭೆಯ ವ್ಯವಸ್ಥಿತ ನಿರ್ವಹಣೆ, ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತಾಲಯದ ನಿರ್ದೇಶಕರ ಸೂಚನೆಯಂತೆ 15 ಜಿಲ್ಲೆಯಿಂದ ನಾಲ್ಕು ರೈತ ಪ್ರತಿನಿಧಿಗಳಿಗೆ ಮಾತ್ರ ಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಎಲ್ಲಾ ಜಿಲ್ಲೆಗಳ ರೈತರು ಹಾಗೂ ರೈತ ಸಂಘಟನೆಗಳು ಈ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಜಿಲ್ಲೆಯಿಂದ ನಾಲ್ಕು ರೈತ ಪ್ರತಿನಿಧಿಗಳ ಮೂಲಕ ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಲು ಸಹಕರಿಸಬೇಕು.

ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವುದರಿಂದ ಪ್ರವೇಶ ವ್ಯವಸ್ಥೆ, ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗದಂತೆ, ನಿಗದಿಪಡಿಸಲಾದ ರೈತ ಪ್ರತಿನಿಧಿಗಳು ಮಾತ್ರ ಸಭೆಗೆ ಆಗಮಿಸಬೇಕು. ಉಳಿದ ರೈತರು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಹಕರಿಸಿ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು.

ರೈತರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಕ್ರೋಢೀಕರಿಸಿ, ಸಭೆಯಲ್ಲಿ ಸಮರ್ಪಕವಾಗಿ ಮಂಡಿಸಲು ಅಗತ್ಯ ಸಮನ್ವಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ, ಎಲ್ಲಾ ರೈತರು ಹಾಗೂ ರೈತ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಸಭೆಯು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಸಹಕರಿಸಬೇಕು ಎಂದು ಮನವಿ ಮೂಲಕ ಜಿಲ್ಲಾಡಳಿತ ವಿನಂತಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net