18 ರಂದು ಬೆಳಗಾವಿ ಚಲೋ

Published on

ಕೊಲ್ಹಾರ: ಗಾಣಿಗ ಅಭಿವೃದ್ಧಿ ನಿಗಮವನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ತರು ಜತೆಗೆ ಅನುದಾನ ಬಿಡುಗಡೆ ಆಗ್ರಹಿಸಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ವತಿಯಿಂದ ಡಿ.18 ರಂದು ಬೆಳಗಾವಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ದಿಗಂಬರೇಶ್ವರ ಮಠದ ಯೋಗಿ ಕಲ್ಲಿನಾಥ ದೇವರು ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಯುವ ಘಟಕದ ಅಧ್ಯಕ್ಷ ನಂದು ಗಡಗಿ ತಿಳಿಸಿದ್ದಾರೆ. ಸೋಮವಾರ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗಾಣಿಗ ಸಮುದಾಯದ ಹಕ್ಕು ಪಡೆಯಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮುದಾಯದ ಹಕ್ಕಿಗಾಗಿ ಒತ್ತಾಯಿಸಲಾಗುವುದು. ಸರ್ವರು ಬೆಳಗಾವಿ ಚಲೋ ಹೋರಾಟದಲ್ಲಿ ಭಾಗವಹಿಸಬೇಕು. ಹೋರಾಟದಲ್ಲಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಅಧ್ಯಕ್ಷ ಆನಂದ ಕೆ. ಮಂಡ್ಯ ಸೇರಿ ಅನೇಕ ನಾಯಕರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net