ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲ

corona
Published on

ಬೆಳಗಾವಿ: ವಿಶ್ವವನ್ನೇ ಕಾಡುತ್ತಿರುವ ಮಾರಕ ಕರೊನಾ ವೈರಸ್ ಹರಡುವುದನ್ನು ನಿಯಂತ್ರಿಸುವ ಕುರಿತು ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡುವುದು ಮತ್ತು ಬಿಡುವ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರೀತಿ ಲಾಕ್‌ಡೌನ್ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕ ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಳಗಾವಿ ಜಿಲ್ಲೆ ಲಾಕ್‌ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಸರ್ಕಾರಕ್ಕೆ ತಿಳಿಸಲಾಗಿದೆ. ಲಾಕ್‌ಡೌನ್ ಮಾಡುವ ಕುರಿತು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗೋಕಾಕ, ಮೂಡಲಗಿ, ಕಾಗವಾಡ, ಅಥಣಿ, ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್‌ಡೌನ್ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಸ್ವಯಂಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಂಡಿರುವ ಕಡೆಗಳಲ್ಲಿ ಅದು ಮುಂದುವರಿಯಲಿದೆ. ಆ ಭಾಗಗಳಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಸಹಕಾರ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net