

ಬೆಳಗಾವಿ : ಸ್ವಾತಂತ್ರೃ ದಿನಾಚರಣೆ ಹಿನ್ನೆಲೆಯಲ್ಲಿ ಆ.15ರಂದು ಬೆಳಗ್ಗೆ 6ರಿಂದ ರಾತ್ರಿ 7ರ ವರೆಗೆ ಜಿಲ್ಲೆಯ ಎಲ್ಲ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಬೌದ್ಧ ಮಂದಿರ, ಜೈನ್ ಬಸದಿ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿನ ಪದಾಧಿಕಾರಿಗಳು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ ತಿಳಿಸಿದ್ದಾರೆ