

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ಇನ್ನೂ ಹಲವು ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವುದು ಹಾಗೂ ರಸ್ತೆ ಅಭಿವೃದ್ಧಿಯ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಗಳು ಇನ್ನೂ ಹಾಗೆಯೇ ಇವೆ. ರಾಜ್ಯ ಸರ್ಕಾರದಿಂದ ಎಲ್ಲ ರೀತಿಯಲ್ಲೂ ಬೆಳಗಾವಿ ಅಭಿವೃದ್ಧಿಗೆ ಹಂತ ಹಂತವಾಗಿ ಕಾಮಗಾರಿಗಳನ್ನು ಮಾಡುತ್ತೇವೆ ಎಂದು ಸಚಿವ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಖಾನಾಪುರ ತಾಲೂಕಿನ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದು ಹಾಗೂ ಚೋರ್ಲಾ ಘಾಟನಲ್ಲಿ ಸುರಕ್ಷಿತ ರಸ್ತೆ ಸಾರಿಗೆ ವೃದ್ಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿನ 20 ಪ್ರಸ್ತಾವಣೆಗಳೂ ಪೆಂಡಿಂಗ್‌ನಲ್ಲಿವೇ. ಒಂದೊಂದೇ ಕಾಮಗಾರಿ ಪೂರ್ಣಗೊಳಿಸುತ್ತೇವೆ. ‘ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರನ್ನು ಆಹ್ವಾನಿಸುವುದು ನನ್ನ ಕೆಲಸವಲ್ಲ; ಅಧಿಕಾರಿಗಳ ಕೆಲಸ’ ಎಂದು ಪ್ರಶ್ನೆಯೊಂದಕ್ಕೆ ಸಚಿವ ಜಾರಕಿಹೊಳಿ ಉತ್ತರಿಸಿದರು.