ಬೆಳಗಾವಿ ಗಣೇಶೋತ್ಸವ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಿ ; ಎಡಿಜಿಪಿ ಆರ್.ಹಿತೇಂದ್ರ ಸೂಚನೆ

FB_IMG_1695224511023.jpg
Published on

ಬೆಳಗಾವಿ : ಇಡೀ ರಾಜ್ಯದಲ್ಲಿಯೇ ಬೆಳಗಾವಿಯಲ್ಲಿ ಗಣೇಶೋತ್ಸವ ವಿಶೇಷವಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಟ್ಟು ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದಂತೆ ಯಶಸ್ವಿಗೊಳಿಸಬೇಕು ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಉನ್ನತ ಅಧಿಕಾರಿಗಳ ಸಭೆ ನಡೆಸಿದರು.
ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತಾಲಯದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಸಿ, ಬಂದೋಬಸ್ತ್‌ಗೆ ನಿಯೋಜನೆ ಮಾಡಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮಾಹಿತಿ ಪಡೆದ ಅವರು, ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನ ನೀಡಿದರು.

ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು ಮಾತನಾಡಿ, ಗಣೇಶೋತ್ಸವಕ್ಕೆ ಎರಡು ಹಂತದಲ್ಲಿ ಸಿಬ್ಬಂದಿಯನ್ನು  ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕೆಎಸ್‌ಆರ್‌ಪಿ ತುಕಡಿ-17 ಹಾಗೂ ಆರ್‌ಎಎಫ್-1 ತುಕಡಿಗಳ ಸಮೇತ ಹೊರ ಜಿಲ್ಲೆಯ ಹಲವು ಪೊಲೀಸ್ ಅಧಿಕಾರಿಗಳು ನಿಯೋಜಿಸಲಾಗಿದೆ ಎಂದು ಬಂದೋಬಸ್ತ್ ವ್ಯವಸ್ಥೆ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ ರೋಹನ್ ಜಗದೀಶ, ಅಪರಾಧ ಮತ್ತು ಸಂಚಾರ ವಿಭಾಗದ ಉಪ ಆಯುಕ್ತೆ ಸ್ನೇಹಾ ಪಿ.ವಿ., ಎಸಿಪಿಗಳಾದ ನಾರಾಯಣ ಬರಮನಿ, ಸದಾಶಿವ ಕಟ್ಟಿಮನಿ, ಕೇಶವ ಟಿಂಗರಿಕರ್, ಗಂಗಾಧರ ಮಠಪತಿ, ಅರುಣ ಕುಳ್ಳೂರ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net