ದೇಶ ಸಬಲವಾಗಲು ಅದರ ಆರ್ಥಿಕ ಚಟುವಟಿಕೆಗಳೇ ಅತ್ಯಂತ ನಿರ್ಣಾಯಕ

Screenshot_2023_0805_134235.png
Published on

ಬೆಳಗಾವಿ: ಇಂದಿನ‌ ಆಧುನಿಕ ಯುಗವು ಆರ್ಥಿಕ ಸಾಮರ್ಥ್ಯದ ಮೇಲೆ ನಿಂತಿದೆ. ಯಾವುದೇ ದೇಶ ಸಬಲವಾಗಲು ಅದರ ಆರ್ಥಿಕ ಚಟುವಟಿಕೆಗಳೇ ಅತ್ಯಂತ ನಿರ್ಣಾಯಕವಾಗಿವೆ. ಹೀಗಾಗಿ, ಹೊಸ ತಲೆಮಾರಿನಲ್ಲಿ ವಾಣಿಜ್ಯಶಾಸ್ತ್ರದ ಅಧ್ಯಯನವು ಮಹತ್ವಪೂರ್ಣ ಮತ್ತು ವಿಶಿಷ್ಟವಾಗಿದೆ ಎಂದು ಪ್ರೊ.ವಿಜಯ ನಾಗಣ್ಣವರ ಹೇಳಿದರು.

ಸಮೀಪದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ನಡೆದ ವಾಣಿಜ್ಯಶಾಸ್ತ್ರ ವಿಭಾಗದ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದಲಾಗುತ್ತಿರುವ ಮಾರುಕಟ್ಟೆಯ ಅಭಿರುಚಿಗಳು ಹಾಗೂ ಜನರ ಪ್ರವೃತ್ತಿಗಳಿಗೆ ಅನುಗುಣವಾಗಿ ಕೌಶಲಭರಿತ ಮಾನವ ಸಂಪನ್ಮೂಲದ ಅಗತ್ಯವಿದೆ. ಮಾರುಕಟ್ಟೆ ಹಾಗೂ ಹಣಕಾಸಿನ ನಿರ್ವಹಣೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನವು ತನ್ನದೇ ಆದ ಮಹತ್ವದ ಕೊಡುಗೆ ನೀಡುತ್ತಿದೆ. ಈ ದೃಷ್ಟಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗವು ಮೊದಲಿನಿಂದಲೂ ಗುಣಮಟ್ಟ ಮತ್ತು ಗಮನಾರ್ಹವಾದ ಸಾಧನೆ ಮಾಡುತ್ತ ಬಂದಿದೆ’ ಎಂದರು.

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ.ಎಸ್.ಬಿ.ಆಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಚ್.ವೈ.ಕಾಂಬ್ಳೆ ಅಧ್ಯಕ್ಷತೆ ವಹಿಸಿದ್ದರು.

ಯಾಸ್ಮಿನ್ ಬೇಗಂ ನದಾಫ ಅತಿಥಿಗಳ ಪರಿಚಯ ಮಾಡಿದರು. ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಚೀಂದ್ರ ಜಿ.ಆರ್. ಮತ್ತು ಅಶ್ವಿನಿ ಜಾಮುನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net