ಪರಿಶೀಲಿಸಿಯೇ ನೂತನ ಬಡಾವಣೆಗಳಿಗೆ ಅನುಮತಿ ನೀಡಿ ; ಉಸ್ತುವಾರಿ ಸಚಿವ ಜಾರಕಿಹೊಳಿ ಸೂಚನೆ

IMG-20230905-WA0049.jpg
Published on

ಬೆಳಗಾವಿ : ಬೆಳಗಾವಿ ನಗರದ ಪರಿಷ್ಕೃತ ಮೂರನೇ ಮಾಸ್ಟರ್ ಪ್ಲ್ಯಾನ್‌ಅನ್ನು ಸದ್ಯದ ಸ್ಥಳೀಯ ಯೋಜನಾ ಪ್ರದೇಶ ಹಾಗೂ ಹೆಚ್ಚುವರಿಯಾಗಿ 28 ಗ್ರಾಮಗಳನ್ನು ಸೇರಿಸಿಕೊಂಡು ಸ್ಥಳೀಯ ಯೋಜನಾ ಪ್ರದೇಶ ಘೋಷಿಸಿರುವ ಗ್ರಾಮ/ಪಟ್ಟಣಗಳಿಗೆ ಜಿಐಎಸ್ ಆಧಾರಿತ ಅಮೃತ ಟಿಆರ್‌ಓ ಅನ್ವಯ ಮಾಸ್ಟರ್‌ಪ್ಲ್ಯಾನ್ ತಯಾರಿಸಲು ಬುಡಾ ಸಭೆಯಲ್ಲಿ ಅನುಮೋದಿಸಲಾಯಿತು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಬುಡಾ ವ್ಯಾಪ್ತಿ ಸೇರ್ಪಡಿಸಿಕೊಳ್ಳುವಲ್ಲಿ ಕೆಲವೆಡೆ ಎರಡು ಗ್ರಾಮಗಳ ನಡುವಿನ ಗ್ರಾಮ ಬಿಟ್ಟು ಹೋಗಿದ್ದು, ಅವುಗಳನ್ನು ಹೆಚ್ಚುವರಿ ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು ಎಂದು .
ಬುಡಾ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಬಡಾವಣೆಗಳಲ್ಲಿ ಉದ್ಯಾನ, ರಸ್ತೆ, ಒಳಚರಂಡಿ, ನಾಗರಿಕ ಸೌಲಭ್ಯ ನಿವೇಶನ ಮತ್ತಿತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ಅಧಿಕಾರಿಗಳು ಸೂಕ್ತ ಪರಿಶೀಲನೆ ಕೈಗೊಂಡ ಬಳಿಕವೇ ಪ್ರಾಧಿಕಾರದಿಂದ ಅನುಮೋದನೆ ನೀಡಬೇಕು. ನಿವೇಶನಗಳ ದರ ನಿಗದಿ ಹಾಗೂ ಹಂಚಿಕೆ ಕುರಿತು ಮಾಹಿತಿ ಪಡೆದ ಅವರು,  ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿಗದಿಪಡಿಸಲಾಗಿರುವ ಇಎಂಡಿ ಹೆಚ್ಚಿಸುವ ಬಗ್ಗೆ ಕೈಗೊಂಡ ನಿರ್ಣಯವನ್ನು ಅಂಗೀಕರಿಸಬಹುದು ಎಂದು ಸಚಿವರು ಹೇಳಿದರು.

ನಗರದಲ್ಲಿ ವಿಶಾಲವಾದ ಜಿಲ್ಲಾ ಕ್ರೀಡಾಂಗಣಕ್ಕೆ ಅಗತ್ಯವಾದ ಜಮೀನು ಗುರುತಿಸುವಂತೆ  ಸಚಿವ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ತಿಳಿಸಿದರೆ. ‘ಒಂದು ಲಕ್ಷ ಜನರನ್ನು ಸೇರಿಸಬಹುದಾದಷ್ಟು ವಿಶಾಲವಾದ ಜಿಲ್ಲಾ ಕ್ರೀಡಾಂಗಣ ನಿರ್ಮಿಸುವ ಅಗತ್ಯವಿದೆ. ಇದಕ್ಕೆ ಅಗತ್ಯವಾದ ಜಮೀನನ್ನು ಗುರುತಿಸಬೇಕು. ಅನುಮತಿ ಪಡೆದುಕೊಂಡ ಹೊಸ ಬಡಾವಣೆಗಳಲ್ಲಿ ನಿಯಮಾವಳಿ ಪಾಲಿಸಿರುವುದನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಉದ್ಯಾನ, ಯುಜಿಡಿ, ವಿದ್ಯುತ್ ಸಂಪರ್ಕ, ರಸ್ತೆ ಮತ್ತಿತರ ಅಭಿವೃದ್ಧಿ ಸಂಪೂರ್ಣಗೊಂಡಿರುವ ಬಡಾವಣೆಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದರು.
 

ಮಾಸ್ಟರ್‌ಪ್ಲಾೃನ್ ಅವಧಿ ಮುಗಿದಿದ್ದು, ಪರಿಷ್ಕೃತ ಪ್ಲ್ಯಾನ್ ಜಾರಿಗೆ ಬರುವವರೆಗೆ ಹಳೆಯ ಪ್ಲ್ಯಾನ್  ಮುಂದುವರಿಸಲು ಅನುಮೋದನೆ ನೀಡಬೇಕಿದೆ ಎಂದು ಬುಡಾ ಆಯುಕ್ತ ಷಕೀಲ್ ಅಹ್ಮದ್ ಹೇಳಿದರು.
ಜಿಲ್ಲಾಧಿಕಾರಿ, ಬುಡಾ ಆಡಳಿತಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಕಣಬರ್ಗಿ ಬಡಾವಣೆ ಅಭಿವೃದ್ಧಿಗೆ 87 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಇತರೆ ಅಭಿವೃದ್ಧಿ ಕೆಲಸಕ್ಕೆ 9 ಕೋಟಿ ರೂ.ಲಭ್ಯವಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿ ಹೊರತುಪಡಿಸಿ ಇತರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಹುದು. ಕೆರೆಯ ಸುತ್ತಮುತ್ತಲಿನ ಜಾಗೆಗಳ ಅತಿಕ್ರಮಣ ಪರಿಶೀಲಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಬೆಯಲ್ಲಿ ಶಾಸಕರಾದ ಆಸಿಫ್ ಸೇಠ, ಅಭಯ ಪಾಟೀಲ ಸೇರಿದಂತೆ ಬುಡಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net