ಎವಿಎಸ್ ಮೂರ್ತಿ, ಎಚ್.ಎಸ್.ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್

IMG-20230801-WA0053.jpg
Published on

ಬೆಳಗಾವಿ:  ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವ ಕಾರ್ಯದರ್ಶಿ ಡಾ.ಎ.ವಿ.ಎಸ್.ಮೂರ್ತಿ ಹಾಗೂ ಮೈಸೂರು ಮೆರ್ಕ್ಯಾನ್ ಟೈಲ್ ಕಂಪನಿಯ ಎಂ.ಡಿ.ಎಚ್.ಎಸ್.ಶೆಟ್ಟಿ ಅವರಿಗೆ ವಿಟಿಯುನಿಂದ  'ಡಾಕ್ಟರ್ ಆಫ್ ಸೈನ್ಸ್ ' ಪದವಿ ಪ್ರದಾನ ಮಾಡಲಾಯಿತು.

ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ, 23ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ್ ಥಾವರಚಂದ್ ಗೆಹ್ಲೋಟ್ ಅವರು, ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಸಮಾರಂಭದಲ್ಲಿ ರಾಜ್ಯಪಾಲರು ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧಿಪತಿ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದರು.‌

ರಾಜ್ಯಪಾಲ ಥಾವರಚಂದ್  ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ವಿತರಿಸಿದರು.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ವಿತರಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಐಐಟಿಎಂನ ನಿರ್ದೇಶಕ ವಿ.ಕಾಮಕೋಟಿ, ಕಲುಪತಿ ಎಸ್.ವಿದ್ಯಾಶಂಕರ ಸೇರಿದಂತೆ ಸಿಂಡಿಕೇಟ್ ಸದಸ್ಯರು‌ ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net