ನಂಬಿ ಬಂದವರಿಗೆ ಬಿಜೆಪಿ ದ್ರೋಹ ಮಾಡಲ್ಲ, ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

160620 Ballari Eshwarappa
Published on

ಬಳ್ಳಾರಿ: ಬಿಜೆಪಿ ನಂಬಿ ಬಂದವರಿಗೆ ನೀಡಿರುವ ಭರವಸೆಯಂತೆ ಅವಕಾಶಗಳು ಸಿಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೋಮವಾರ ಬಿಜೆಪಿ ಕೋರ್ ಕಮಿಟಿಯಲ್ಲಿ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಲಿರುವ ನಾಲ್ಕು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ, ಕೇಂದ್ರ ಸಮಿತಿಗೆ ಹೆಸರುಗಳನ್ನು ಶಿಫಾರಸು ಮಾಡಿದ್ದೇವೆ. ಐದು ನಾಮಕರಣ ಸದಸ್ಯರ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಒಟ್ಟು ಒಂಬತ್ತು ಸ್ಥಾನಗಳಲ್ಲಿ ಬಿಜೆಪಿಯನ್ನು ನಂಬಿಕೊಂಡು ಬಂದವರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಬಿಜೆಪಿ ನಂಬಿ ಬಂದವರಿಗೆ ದ್ರೋಹ ಮಾಡುವುದಿಲ್ಲ ಎಂದು ತಾಲೂಕಿನ ಮಿಂಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net