ಕಟ್ಟಡ ತೆರಿಗೆ, ನೀರಿನ ಶುಲ್ಕ ಬಾಕಿಯಿರುವವರಿಗೆ ನೋಟಿಸ್ : ಬೆಳಂದೂರು ಗ್ರಾ.ಪಂ.ಸಾಮಾನ್ಯಸಭೆಯಲ್ಲಿ ನಿರ್ಧಾರ : ಕಟ್ಟಡ ಸ್ಥಳಾಂತರಕ್ಕೆ ಚಿಂತನೆ

New Project (6)
Published on

ಕಡಬ: ಬೆಳಂದೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಗ್ರಾ.ಪಂ.ಅಧ್ಯಕ್ಷೆ ತೇಜಾಕ್ಷಿ ಭಾಸ್ಕರ ಪೂಜಾರಿ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಬೆಳಂದೂರು ಗ್ರಾಮ ಆಡಳಿತ ಅಧಿಕಾರಿ ಕಚೇರಿ ದುಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳಂದೂರು ಗ್ರಾಮ ಪಂಚಾಯಿತಿ ಹಳೆಯ ಕಟ್ಟಡ ಸ್ಥಳಾಂತರಿಸುವ ಬಗ್ಗೆ ಬೆಳಂದೂರು, ಕಾಯಿಮಣ ಗ್ರಾಮಸ್ಥರು ನೀಡಿದ ಮನವಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು. ಗ್ರಾಮ ಪಂಚಾಯಿತಿ ನೂತನ ಕಟ್ಟಡ ಸ್ಥಳಾಂತರ ಬಳಿಕ ಮುಂದಿನ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಡ ತೆರಿಗೆ, ಭೂಮಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿ ಕುರಿತು ಸಭೆಯಲ್ಲಿ ಚರ್ಚಿಸಿ, ಕಳೆದ 3 ವರ್ಷಗಳಿಂದ ವಸೂಲಾತಿ ಬಾಕಿ ಇರುವ ಕಟ್ಟಡ ತೆರಿಗೆ, ಭೂಮಿ ತೆರಿಗೆ ಮತ್ತು ನೀರಿನ ಶುಲ್ಕ ಬಾಕಿಯಿರುವವರಿಗೆ ನೋಟಿಸ್ ನೀಡಿ ವಸೂಲಾತಿಗೆ ಕ್ರಮ ಕೈಗೊಳ್ಳುವಂತೆ ನಿರ್ಣಯಿಸಲಾಯಿತು.

ಗ್ರಾ.ಪಂ. ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ಮೋಹನ್ ಅಗಳಿ, ವಿಠಲ ಗೌಡ ಅಗಳಿ, ಪ್ರವೀಣ್ ಕೆರೆನಾರು, ಲೋಹಿತಾಕ್ಷ ಕೆಡೆಂಜಿಕಟ್ಟ, ಜಯರಾಮ ಬೆಳಂದೂರು, ಹರಿಣಾಕ್ಷಿ ಬನಾರಿ, ಪಾರ್ವತಿ ಮರಕ್ಕಡ, ತಾರಾ ಅನ್ಯಾಡಿ, ಗೌರಿ ಮಾದೋಡಿ ಉಪಸ್ಥಿತರಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾರಾಯಣ್ ಸಭೆ ನಿರ್ವಹಿಸಿದರು. ಲೆಕ್ಕ ಸಹಾಯಕಿ ಸುನಂದಾ ಸುತ್ತೋಲೆ, ಸಾರ್ವಜನಿಕ ಅರ್ಜಿ ಓದಿದರು. ಸಿಬ್ಬಂದಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net