ಕುರುಬ, ಲಿಂಗಾಯತ ಸಮಾಜಕ್ಕೆ ಅನ್ಯಾಯ

K A Ramalingareddy
ಕೆ.ಎ.ರಾಮಲಿಂಗಪ್ಪ ಬಿಜೆಪಿ ಕೋರ್ ಕಮಿಟಿ ಸದಸ್ಯ.
Published on

ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿಗೆ ಟಿಕೆಟ್ ನೀಡಿದಲ್ಲಿ ಬಿಜೆಪಿಗೆ ಕಷ್ಟವಾಗಲಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಬುಡಾ ಮಾಜಿ ಅಧ್ಯಕ್ಷ, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಎ.ರಾಮಲಿಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಾರ್ದನ ರೆಡ್ಡಿ, ಸೋಮಶೇಖರ ರೆಡ್ಡಿ, ಕರುಣಾಕರ ರೆಡ್ಡಿ ಸೇರಿ ಇಡೀ ಕುಟುಂಬ ಅಧಿಕಾರ ಅನುಭವಿಸಿದೆ. ವಾಸ್ತವದಲ್ಲಿ ಕುರುಬ, ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ. ರೆಡ್ಡಿ ಸೋದರರ ವರ್ತನೆಯಿಂದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಯಭೀತರಾಗಿದ್ದಾರೆ. ಪಕ್ಷ ಯಾರಿಗೂ ಟಿಕೆಟ್ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net