ಕ್ಷುಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ

Published on

ಬಳ್ಳಾರಿ ; ಕ್ಷುಲಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಒಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಇಲ್ಲಿನ ಪಾರ್ವತಿ ನಗರದಲ್ಲಿ ಶುಕ್ರವಾರ ನಡೆದಿದೆ.

ತಾಲೂಕಿನ ಸಿರಿವಾರ ಗ್ರಾಮದ ಅಬ್ದುಲ್ ನಬಿ (46) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಶಿವಶಂಕರ (47) ಕೊಲೆ ಮಾಡಿರುವ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಸಿರಿವಾರ ಗ್ರಾಮದ ನಿವಾಸಿಗಳಾಗಿರುವ ಇಬ್ಬರೂ, ಅನ್ಯ ಕಾರ್ಯನಿಮಿತ್ತ ಶುಕ್ರವಾರ ಬಳ್ಳಾರಿಗೆ ಬಂದಿದ್ದಾರೆ. ಇಬ್ಬರ ನಡುವೆ ಮಾತಿಚಕಮಕಿ ನಡೆದಿದ್ದು, ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪರಿಣಾಮ ಆರೋಪಿ ಶಿವಶಂಕರ್, ಅಬ್ದುಲ್ ನಬಿ ಎನ್ನುವನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಅಬ್ದುಲ್ ನಬಿನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗಾಂಧಿನಗರ ಪೊಲೀಸರು, ಆರೋಪಿ ಶಿವಶಂಕರನನ್ನು ಬಂಧಿಸಿ ತನಿಖೆ ಕೈಗೊಂಡಿದ್ದು, ಸಹಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ ಎನ್ನಲಾಗುತ್ತಿದೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net