ಕ್ರೈಸ್ತರನ್ನು ನುಗ್ಗಿಸುವ ಹುನ್ನಾರ

Published on

ಬಳ್ಳಾರಿ : ರಾಜ್ಯ ಸರ್ಕಾರ ಉದ್ದೇಶಿತ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದು ಜಾತಿಗಳ ನಡುವೆ ಕ್ರೈಸ್ತರನ್ನು ನುಗ್ಗಿಸುವ ಹುನ್ನಾರ ವಿರೋಧಿಸಿ, ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಿಂದ ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಹಾಗೂ ಬಿಜೆಪಿ ಮುಖಂಡರು ಭಾಗವಹಿಸಿ ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಡಿಸಿಗೆ ಮನವಿ ಸಲ್ಲಿಸಿದರು.

ರಾಜಕೀಯ ಲಾಭಕ್ಕಾಗಿ ರಾಜ್ಯ ಸರ್ಕಾರ ಹಿಂದು ಧರ್ಮದ ಜಾತಿಗಳ ಮುಂದೆ ಕ್ರಿಶ್ಚಿಯನ್ ಜಾತಿ ಸೇರಿಸುವ ಹುನ್ನಾರ ನಡೆಸಿದೆ. ಜಾತಿಗಳನ್ನು ಒಡೆಯುವ ನಿಟ್ಟಿನಲ್ಲಿ ಹಿಂದು ಜಾತಿ ಪಕ್ಕದಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್ ಸೇರ್ಪಡೆಯನ್ನು ಜಾಗೃತಿ ವೇದಿಕೆ ಖಂಡಿಸಿದೆ. ಸರ್ಕಾರ ಕೂಡಲೇ ನಿರ್ಧಾರ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವೇದಿಕೆ ಎಚ್ಚರಿಸಿತು. ಬಳಿಕ ಡಿಸಿ ನಾಗೇಂದ್ರ ಪ್ರಸಾದ್ ಕೆ. ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net