ಬಡವರಿಂದ ಶಿಕ್ಷಣ ಕಿತ್ತುಕೊಳ್ಳುವ ಹುನ್ನಾರ

Published on

ಬಳ್ಳಾರಿ ; ರಾಜ್ಯದ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸದೇ, ಕಡಿಮೆ ದಾಖಲಾತಿ ಹೆಸರಲ್ಲಿ ಶಾಲೆಗಳನ್ನು ಮುಚ್ಚುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣ ಕಿತ್ತುಕೊಳ್ಳುವ ಹುನ್ನಾರವಾಗಿದೆ ಎಂದು ಎಐಎಸ್‌ಇಸಿ ಜಿಲ್ಲಾಧ್ಯಕ್ಷ ಆರ್.ಸೋಮಶೇಖರ್ ಗೌಡ ಕಿಡಿಕಾರಿದರು.

ನಗರದ ಆಂಜನೇಯ ದೇವಾಸ್ಥಾನದ ಆವರಣದಲಿ ್ಲಎಐಡಿಎಸ್‌ಒ ಮತ್ತು ಎಐಎಸ್‌ಇಸಿಯಿಂದ ಸಹಯೋಗದೊಂದಿಗೆ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ನಿಲುವ ವಿರೋಧಿಸಿ ಇತ್ತೀಚೆಗೆ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿದರು.

ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವನ್ನು ಕೈಬಿಡಬೇಕು. ಕೂಡಲೇ ಹಾಜರಾತಿ ಕಡಿಮೆ ಇರುವ ಶಾಲೆಗಳನ್ನು ಮುಚ್ಚುವ ಬದಲು ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಅಭಿವೃದ್ಧಿಪಡಿಸಿ, ರಕ್ಷಿಸಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಜಿಲ್ಲಾಧ್ಯಕ ಕೆ.ಈರಣ್ಣ ಮಾತನಾಡಿ, ರಾಜ್ಯದಲಿ ್ಲ6000ಕ್ಕೂ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 3500ಕ್ಕೂ ಹೆಚ್ಚು ಶಾಲೆಗಳಲ್ಲಿಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ಚಾವಣಿಗಳು ಸೋರುತ್ತಿವೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ59,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 29 ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಗೊಂಡು ಬೀಳುವ ಹಂತದಲ್ಲಿವೆ. ಸರ್ಕಾರ ಬೇಜವಾಬ್ದಾರಿತನದಿಂದ, ಹಲವು ವರ್ಷಗಳಿಂದ ದುರಸ್ತಿ ಕಾಣದ ಶಾಲೆಗಳ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿರುವುದು, ಪ್ರಾಣ ಕಳೆದುಕೊಂಡಿರುವುದಂತೂ ಹೃದಯದ್ರಾವಕ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net