ಬಳ್ಳಾರಿ : ಭಾರತ ಸಂವಿಧಾನದ ನಮ್ಮೆಲ್ಲರ ಆಶಾಕಿರಣ ಎಂದು ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಜಿಲ್ಲಾಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಮಾತನಾಡಿದರು. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸರ್ವರಿಗೂ ಸ್ವಾತಂತ್ರ್ಯ, ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ. ನಮ್ಮದು ಸಾರ್ವಭೌಮ, ಸಮಾಜವಾದಿ,ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿದೆ. ಲಿಖಿತ ಹಾಗೂ ಮಾದರಿ ಸಂವಿಧಾನವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ತನ್ನ ಬದುಕು ರೂಪಿಸಿಕೊಳ್ಳಲು ಸಂವಿಧಾನದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ಆದ್ದರಿಂದ ವಿದ್ಯಾರ್ಥಿಗಳು, ಯುವಕರು ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಹಾಗೂ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಇದೇ ವೇಳೆ ನಿ.ಶಿಕ್ಷಕ ಗಂಗಪ್ಪ ಅವರನ್ನು ಸನ್ಮಾನಿಸಲಾಯಿತು.