ಭಾರತ ಆರ್ಥಿಕತೆಯಲ್ಲಿ ಪ್ರಬಲ

Published on

ಬಳ್ಳಾರಿ ; ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಶ್ವದಲ್ಲಿ ಭಾರತ ಆರ್ಥಿಕತೆಯಲ್ಲಿ ಪ್ರಬಲವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೆಲ ವರ್ಷಗಳ ಹಿಂದೆ ಭಾರತವನ್ನು ಭೀಕ್ಷಕರ ಹಾಗೂ ಹಾವಾಡಿಗರ ದೇಶವೆಂದು ಕರೆಯತ್ತಿದ್ದರು. ಮೋದಿ ಪ್ರಧಾನಿಯಾದ ಬಳಿಕ ಭಾರತವನ್ನು ವಿಶ್ವವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಆರವತ್ತು ವರ್ಷ ದೇಶ ಆಳಿದ ಕಾಂಗ್ರೆಸ್ ನಾಯಕರು ದೇಶ ಅಭಿವೃದ್ಧಿಗೊಳಿಸದೆ ವೈಯಕ್ತಿಕ ಹಿತಾಸಕ್ತಿ ಹೊಂದಿದ್ದರು ಎಂದು ಟೀಕಿಸಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿ ಧೋರಣೆಯಿಂದ ತುರ್ತ ಪರಿಸ್ಥಿತಿ ಘೋಷಣೆ ಮಾಡಿ ದಬ್ಬಾಳಿಕೆ ತೋರಿದ್ದರು. ಅಲ್ಲದೆ, ಕಮಿಷನ್ ಮಧ್ಯೆವರ್ತಿಗಳನ್ನು ಬೆಳೆಸುವುದೆ ಗಾಂಧಿ ಕುಟುಂಬದ ಕೆಲಸವಾಗಿದೆ ಎಂದು ಗುಡುಗಿದರು. ಯುಪಿಎ ಆಳ್ವಿಕೆಯಲ್ಲಿ ದೇಶದಲ್ಲಿ ಭ್ರಷ್ಟಾಚಾರ ತುಂಬಿತ್ತು, ಕಳೆದ ಹತ್ತು ವರ್ಷದಲ್ಲಿ ಭಾರತ ಆರ್ಥಿಕವಾಗಿ ಪ್ರಬಲ ದೇಶವಾಗಿ ಬದಲಾಗಿದೆ ಎಂದರು.

ಬಿಜೆಪಿಯು ದೇಶದಲ್ಲಿ ತ್ರಿವಳಿ ತಲಾಕ್ ರದ್ದು, ವಕ್ಫ್ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವು ಜನಪರ ಕೆಲಸ ಮಾಡಿದ್ದಾರೆ. ಉಗ್ರರ ಮಟ್ಟ ಹಾಕುವ ಕೆಲಸ ಮಾಡಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ಮೋದಿ ಸರ್ಕಾರದ ಯೋಜನೆ ಮತ್ತು ಅಭಿವೃದ್ಧಿ ವಿವರಿಸಿದರು.

ಅಭಿವೃದ್ದಿ ವಿಷಯದಲ್ಲಿ ಕೇವಲ ರಾಜ್ಯದಲ್ಲಷ್ಟೇ ಅಲ್ಲದೆ ಜಿಲ್ಲೆಯಲ್ಲಿಯೂ ಯಾವ ಕೆಲಸ ನಡೆಯುತ್ತಿಲ್ಲ. ಬಿಜೆಪಿ ಸರ್ಕಾರದಿಂದ ಬಂದ ಅನುದಾನದಿಂದಲೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಸ್ಥಳೀಯ ನಾಯಕರಿಗೆ ಪರೋಕ್ಷವಾಗಿ ಟೀಕಿಸಿದರು.

ಮಾಜಿ ಶಾಸಕರಾದ ಜಿ.ಸೋಮಲಿಂಗಪ್ಪ, ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧ್ಯಕ್ಷ ಅನಿಲ್‌ಕುಮಾರ ಮೋಕಾ, ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್, ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ಉಜ್ವಲಾ, ಎಚ್.ಹನುಮಂತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net