ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

Published on

ಬಳ್ಳಾರಿ : ರೈತರು ರಾಷ್ಟ್ರದ ಬೆನ್ನೆಲುಬಾಗಿದ್ದು, ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎ. ಸೋಮಸುಂದರ ಹೇಳಿದರು.

ನಗರದ ತಾಲೂಕು ಕಚೇರಿ ಅವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈತರು ದೇಶದ ಜೀವನಾಡಿಯಾಗಿದ್ದು, ಸಮಾಜದಲ್ಲಿ ಎಲ್ಲರೂ ರೈತರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದರು.

ಉಪ ಕೃಷಿ ನಿರ್ದೇಶಕ ಎಸ್.ಎನ್. ಮಂಜುನಾಥ ಮಾತನಾಡಿ, ರೈತರು ಹಗಲು-ಇರುಳು ಯಾವುದೇ ಸ್ವಾರ್ಥ ಇಲ್ಲದೇ ನಿಸ್ವಾರ್ಥದಿಂದ ದುಡಿಯುವ ಶ್ರಮಿಕರಾಗಿದ್ದಾರೆ, ಅವರಿಗೆ ಗೌರವಿಸುವುದು ನಮ್ಮ ಧರ್ಮವಾಗಿದೆ. ರೈತರು ತಮ್ಮ ಆರೋಗ್ಯದ ಕಾಳಜಿ ವಹಿಸಬೇಕು ಎಂದರು.

ಬಳಿಕ, ಪ್ರಸ್ತಕ ಸಾಲಿನಲ್ಲಿ ತಾಲೂಕು ಕೃಷಿ ಇಲಾಖೆಯ ಆತ್ಮಯೋಜನೆ(ಕಿಸಾನ್ ಗೋಷ್ಠಿ)ಯಡಿ ಸಾಧಕ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲಾಯಿತು.

ಜಿಲ್ಲಾ ಮಟ್ಟದಿಂದ 10 ರೈತರು ಹಾಗೂ ತಾಲೂಕು ಮಟ್ಟದಿಂದ ಮೂವರು ರೈತ-ರೈತ ಮಹಿಳೆಯರಿಗೆ ಸಮಗ್ರ ಕೃಷಿ ಪದ್ದತಿಯಡಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net