ವಿವೇಕಾನಂದರ ತತ್ವ ಅಳವಡಿಸಿಕೊಳ್ಳಿ

Published on

ಬಳ್ಳಾರಿ : ಯುವಕರು ದೇಶ ಕಟ್ಟಲು ಕೈ ಜೋಡಿಸಿ ಯುವಜನಾಂಗ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು

ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭಾರತ ಕಟ್ಟುವಲ್ಲಿ ಪಾತ್ರ ವಹಿಸಬೇಕು ಎಂದು ವಿಎಸ್ ಕೆ ವಿವಿ ಕುಲಸಚಿವ ಎಸ್. ಎನ್. ರುದ್ರೇಶ್ ಹೇಳಿದರು

ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ಭವನ ಆವರಣದಲ್ಲಿ ವಿದ್ಯಾರ್ಥಿ ಕಲ್ಯಾಣ ಘಟಕದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ

ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಸಂಪತ್ತು ಎಂದರೆ ಯುವಕರು. ದುಶ್ಚಟಗಳ ಮೋರೆ ಹೋಗುವುದನ್ನು ಬಿಟ್ಟು ಯುವಕರು ವಿವೇಕಾನಂದರ ತತ್ವಗಳನ್ನು ಅನುಸರಿಸಬೇಕು ಎಂದರು. ವೈಚಾರಿಕ

ಮತ್ತು ಆಧ್ಯಾತ್ಮಿಕ ವಿಚಾರಗಳು ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ಮಾನವೀಯತೆ ವಿಕಾಸ. ಯುವಕರು ದೇಶವನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದರು.

ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರೊ. ಡಾ. ಎಚ್. ತಿಪ್ಪೇಸ್ವಾಮಿ ಮಾತನಾಡಿ, ಅಪರೂಪದ ಜನನ ಶ್ರೇಷ್ಠ ವ್ಯಕ್ತಿ. ಹಿಂದೂ ಧರ್ಮದ ತತ್ವಗಳನ್ನು ಜಗತ್ತಿಗೆ ಪರಿಚಯಿಸಿದ ಮಹಾನ್

ವ್ಯಕ್ತಿಯಾಗಿದ್ದಾರೆ. ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿ, ಅದರಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡಿ ದೇಶ ಆಭಿವೃದ್ಧಿ ಪಡಿಸುವುದು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಂತಹ ಶಕ್ತಿ ಯವಕರಲ್ಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net