ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ

Published on

ಬಳ್ಳಾರಿ : ಉತ್ತಮ ಅಂಕಗಳ ಜತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಹೇಳಿದರು.

ಇಲ್ಲಿನ ಎಸ್‌ಎಸ್‌ಎ ಕಾಲೇಜು ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕಾಲೇಜು ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು. ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು. ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.

ಬಿಡಿಸಿಸಿ ಸಂಸ್ಥೆ ಅಧ್ಯಕ್ಷ ಯಶವಂತ ರಾಜ ನಾಗಿರೆಡ್ಡಿ ,ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಮಾತನಾಡಿದರು. ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿದ್ದು, 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net