ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬದ್ಧ; ಸಚಿವ ಆನಂದಸಿಂಗ್ ಹೇಳಿಕೆ

Hospet Minister Anand Singh
Published on

ಬಳ್ಳಾರಿ: ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ತಿಳಿಸಿದರು.

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾಗುವ ಅನುದಾನಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಡಿಎಂಎಫ್ ಸಭೆಯಲ್ಲಿ ಚರ್ಚಿಸಲಾಗುವುದು. ಕಂಪ್ಲಿ ಸಕ್ಕರೆ ಕಾರ್ಖಾನೆ ಜಾಗ ಮಾರಾಟ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶಾಸಕ ಗಣೇಶ ಈ ಕುರಿತು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಆನಂದಸಿಂಗ್ ಸೋಮವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕರೊನಾ ನೆಪ ಹೇಳಿಕೊಂಡು ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕರೊನಾದ 4200 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ಜಿಂದಾಲ್ ನಿಂದ ನೌಕರರನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಜಿಂದಾಲ್ ಅಧಿಕಾರಿಗಳನ್ನು ಕರೆದು ಈ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದಸಿಂಗ್ ತಿಳಿಸಿದರು.

ಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾಗುವ ಅನುದಾನಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಡಿಎಂಎಫ್ ಸಭೆಯಲ್ಲಿ ಚರ್ಚಿಸಲಾಗುವುದು. ಕಂಪ್ಲಿ ಸಕ್ಕರೆ ಕಾರ್ಖಾನೆ ಜಾಗ ಮಾರಾಟ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶಾಸಕ ಗಣೇಶ ಈ ಕುರಿತು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಆನಂದಸಿಂಗ್ ಸೋಮವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕರೊನಾ ನೆಪ ಹೇಳಿಕೊಂಡು ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕರೊನಾದ 4200 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ಜಿಂದಾಲ್ ನಿಂದ ನೌಕರರನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಜಿಂದಾಲ್ ಅಧಿಕಾರಿಗಳನ್ನು ಕರೆದು ಈ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದಸಿಂಗ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net