ಅರ್ಜಿ ಆಹ್ವಾನ

Published on

ಬಳ್ಳಾರಿ: ತಾಲೂಕಿನ ಕೊಳಗಲ್ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26 ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನವಾಗಿದೆ. ಫೆ.17 ರಂದು ಪ್ರವೇಶ ಪತ್ರ ಬಿಡುಗಡೆ, ಫೆ.28 ರಂದು ಪ್ರವೇಶ ಪರೀಕ್ಷೆ, ಮಾ.10 ರ ನಂತರ ಫಲಿತಾಂಶ ಮತ್ತು ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

ಮಾಹಿತಿಗೆ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಂಡೂರು, ಸಿರುಗುಪ್ಪ ಕಚೇರಿಗೆ ಭೇಟಿ ನೀಡಬಹುದು ಎಂದು ಕೊಳಗಲ್ಲು ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net