ಬಳ್ಳಾರಿ, ಅರ್ಜಿ ಆಹ್ವಾನ

Published on

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲಿನ 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಆದರೆ ಆನ್‌ಲೈನ್ ಅರ್ಜಿ ಸಲ್ಲಿಸಲು ಸರ್ವೀಸ್ ಲಭ್ಯವಿಲ್ಲ ಎಂದು ತೋರಿಸುತ್ತಿರುವ ಕಾರಣ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಮೇ 03 ರೊಳಗೆ ಸಲ್ಲಿಸಬೇಕು. ಮೇ 09 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಮಾಹಿತಿಗೆ ಮೊ.9480843023 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net