ಅರ್ಜಿ ಆಹ್ವಾನ

Published on

ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ(ಆಂಗ್ಲ ಮಾಧ್ಯಮ)ಗಳಲ್ಲಿ ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ (ಸೇವಾಸಿಂಧು) ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ. 10 ಕೊನೆಯ ದಿನವಾಗಿದೆ.

ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಕಚೇರಿ ಅಥವಾ ದೂ.08392-200125/224, ಮೊ.8861623814 ಹಾಗೂ ಜಿಲ್ಲೆಯ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ವಸತಿ ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಇಲಾಖೆಯ ಜಿಲ್ಲಾಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net