ಬಳ್ಳಾರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ 3 ವರ್ಷಗಳ ಅವಧಿಗೆ ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಮೇ 03 ಕೊನೆಯ ದಿನವಾಗಿದೆ. ಸಂದರ್ಶನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಅಥವಾ ದೂ.08392-278077 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.